Breaking News

ಜೆಇಇ ಮತ್ತು ಸಿಇಟಿ ಪರಿಕ್ಷೆಗಳಿಗೆ ಹೋಸ ಕೋರ್ಸ್ ಪ್ರಾರಂಭ..

ಹುಬ್ಬಳ್ಳಿ: ಇಂಜಿನಿಯರಿಂಗ್ ಕಾಲೇಜುಗಳು ಹಾಗೂ ಜೆಇಇ ಮೇನ್ ಗಳಿಗೆ ಪ್ರಾದೇಶಿಕ ಪ್ರವೇಶ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ಆಸಕ್ತಿ ಹೊಂದಿರುವ XI ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವಸಿದ್ದಾತಾ ತರಭೇತಿಯನ್ನು ಆಕಾಶ + ಬೈಜೂಸ್ ಸಿಇಟಿ ಕೋರ್ಸ್ ಗಳನ್ನು ಪರಿಚಯಿಸಿದೆ ಎಂದು ಸಂಸ್ಥೆಯ ಡೆಪ್ಯೂಟಿ ಡೈರೆಕ್ಟರ್ ಸುಧೀರ್ ಹೇಳಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕೆ ಸಿಇಟಿ ಕೋರ್ಸ್ ಗಳು ಸಿಬಿಎಸ್ ಇ ಸಂಯೋಜಿತ ಶಾಲಾ ವಿದ್ಯಾರ್ಥಿಗಳಿಗೆ ವಿನ್ಯಾಸಗೊಳಿಸಲಾದ ಪಠ್ಯ ಕ್ರಮದ ಹೊರತಾಗಿ ಸಹಿತ ರಾಜ್ಯ ಮಂಡಳಿಗಳ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ತರಭೇತಿಯನ್ನು ನೀಡುವುದು ಆಕಾಶ + ಬೈಜೂಸ್ ನ ದೂರದೃಷ್ಟಿಯ ಒಂದು ಭಾಗವಾಗಿದೆ. ಇದು ಎಂಜಿನಿಯರಿಂಗ್ ಕಾಲೇಜು ಹಾಗೂ ಜೆಇಇ ಮೇನ್ಸ್ ಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಸಮಗ್ರ ಕಲಿಕೆಯ ತರಭೇತಿ ನೀಡುತ್ತದ್ದು, ಇದೀಗ ಜೆಇಇ+ಕೆಸಿಇಟಿ ಕೋರ್ಸ್‌ಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳಿಗೆ ಅರ್ಥವಾಗುವ ರೀತಿಯಲ್ಲಿ ಇಂಗ್ಲಿಷ್ ನಲ್ಲಿ XI ತರಗತಿಗೆ ಪ್ರತ್ಯೇಕ ಬ್ಯಾಚ್ ಗಳನ್ನು ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7349785485, 734978548 ಗೆ ಕರೆ ಮಾಡಿ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕ್ಲಸ್ಟರ್ ಬ್ಯುಸಿನೆಸ್ ಹೆಡ್ ಚಂದನಸಿಂಗ್, ರಮನ್ ಶರ್ಮಾ, ಬ್ರ್ಯಾಂಚ್ ಹೆಡ್ ಮಹಾಂತೇಶ ಇದ್ದರು.

Share News

About admin

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *