Breaking News

ಲಾರಿಗಳ ಮುಖಾಮುಖಿ ಡಿಕ್ಕಿ : ಚಾಲಕ ಸಜೀವ ದಹನ


ಬೆಂಗಳೂರು: ಎರಡು ಸಿಮೆಂಟ್ ಲಾರಿಗಳು ಡಿಕ್ಕಿಯಾದ ಪರಿಣಾಮ ಲಾರಿಗಳು ಹೊತ್ತುಕೊಂಡು ಉರಿದ ಘಟನೆ ದೇವನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ನಡೆದಿದೆ.

ಬೆಂಕಿಯಲ್ಲಿ ಚಾಲಕನೊಬ್ಬ ಸಜೀವ ದಹನವಾಗಿರುವ ದುರ್ಘಟನೆ ನಡೆದಿದೆ. ಭುಕ್ತಿ ಡಾಬಾ ಬಳಿ ಸಂಭವಿಸಿದ ಅಪಘಾತದಲ್ಲಿ ಎರಡೂ ಸಿಮೆಂಟ್ ಸಾಗಣೆ ಲಾರಿಗಳು ಹೊತ್ತಿ ಉರಿದವು. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದರು.

ಓರ್ವ ಚಾಲಕನನ್ನು ಸ್ಥಳೀಯರು ರಕ್ಷಿಸಿದರು. ಆದರೆ ಮತ್ತೋರ್ವ ಚಾಲಕ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಮೃತಪಟ್ಟ. ಅಪಘಾತ ಮತ್ತು ಬೆಂಕಿಯಿಂದಾಗಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಸುಮಾರು 3 ಕಿಮೀಯಷ್ಟು ದೂರ ಟ್ರಾಫಿಕ್ ಜಾಮ್ ಆಗಿತ್ತು. ಸಂಚಾರ ನಿಯಂತ್ರಿಸಲು ಟ್ರಾಫಿಕ್​ ಪೊಲೀಸರ ಹರಸಾಹಸಪಟ್ಟರು.

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *