Breaking News

ಮಾ. 26 ರಂದು ಉಡುಪಿ ಕೇದಾರ ಕುಚ್ಚಲಕ್ಕಿ ಬಿಡುಗಡೆ ಕಾರ್ಯಕ್ರಮ


ಹುಬ್ಬಳ್ಳಿ: ಕೇದಾರೋತ್ಥಾನ ಟ್ರಸ್ಟ್ (ರಿ) ಉಡುಪಿ ಹಡಿಲು ಭೂಮಿ ಕೃಷಿ ಆಂದೋಲನದಡಿ ಉತ್ಪಾದಿಸಿದ ಸಂಪೂರ್ಣ ಸಾವಯವ ಕುಚ್ಚಲಕ್ಕಿ ಉಡುಪಿ ಕೇದಾರ ಕುಚ್ಚಲಕ್ಕಿ ಬಿಡುಗಡೆ ಕಾರ್ಯಕ್ರಮವನ್ನು ಮಾ. 26 ರಂದು ಸಂಜೆ 6 ಕ್ಕೆ ಹು-ಧಾ ಬಂಟರ ಸಂಘದ ಆರ್.ಎನ್.ಶೆಟ್ಟಿ ಕಲ್ಯಾಣಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನುಗ್ಗಿ ಸುಧಾಕರ್ ಶೆಟ್ಟಿ ಹೇಳಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಇತ್ತಿಚೆಗೆ ಕೃಷಿ ಸಂಬಂಧಿಸಿದ ಚಟುವಟಿಕೆಗಳು ಕಡಿಮೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಹಾಗೂ ಕೇದಾರೋತ್ಥಾನ ಟ್ರಸ್ಟ್ ನ ಅಧ್ಯಕ್ಷ ಕೆ.ರಘುಪತಿ ಭಟ್ ಅವರ ನೇತೃತ್ವದಲ್ಲಿ ಉಳುಮೆ ಮಾಡಲು ಯೋಗ್ಯವಲ್ಲದ ಭೂಮಿಯಲ್ಲಿ ಕೃಷಿ ಮಾಡಿ 1570 ಕ್ವಿಂಟಾಲ್ ಬೆಳೆ ಬೆಳೆದ ಸಾಧನೆ ಮಾಡಿದ್ದಾರೆ. ಇದೀಗ ಗುಣಮಟ್ಟದ ಉಡುಪಿ ಕೇದಾರ ಕಜೆ ಅಕ್ಕಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದೆ ಎಂದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಕ್ಕಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಿದ್ದು, ಶಾಸಕ ಜಗದೀಶ್ ಶೆಟ್ಟರ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಮುಂತಾದ ಗಣ್ಯಮಾನ್ಯರು ಉಪಸ್ಥಿತಿ ಇರುವರು ಎಂದು ಅವರು ಹೇಳಿದರು‌.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *