ಧಾರವಾಡ:-14 ನೇ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ಅಧಿಕೃತವಾಗಿ ಚಾಲನೆ ದೊರೆಯಿತು.
ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಲಿದೆ . ಈ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನೇಮಕಗೊಂಡಿರುವ ಡಾ.ರಮಾಕಾಂತ ಜೋಶಿ ಅವರನ್ನು ಭವ್ಯ ಮೆರವಣಿಗೆ ಮೂಲಕ ಸಮ್ಮೇಳದ ಮುಖ್ಯ ವೇದಿಕೆಗೆ ಕರೆತರಲಾಯಿತು.
ಧಾರವಾಡದ ಕೆಸಿಸಿ ಬ್ಯಾಂಕ್ ವೃತ್ತದಿಂದ ಆರಂಭವಾದ ಸರ್ವಾಧ್ಯಕ್ಷರ ಮೆರವಣಿಗೆಯಲ್ಲಿ ಡೊಳ್ಳು ಕುಣಿತ , ಮಹಿಳಾ ಡೊಳ್ಳು ಕುಣಿತ , ಬೊಂಬೆ ಕುಣಿತ , ಕರಡಿ ಮಜಲಿನ ಮೇಳದವರು ಪಾಲ್ಗೊಂಡು ಮೆರವಣಿಗೆಯ ಮೆರಗು ಹೆಚ್ಚಿಸಿದರು . ಮೆರವಣಿಗೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಲಿಂಗರಾಜ ಅಂಗಡಿ ಸೇರಿದಂತೆ ಅನೇಕ ಸಾಹಿತ್ಯಾಸಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

