ಹುಬ್ಬಳ್ಳಿ : ಸ್ಟಾರ್ಟ್ಅಪ್ ಉದ್ದಿಮೆಗಳ ಸ್ಥಾಪನೆಯಲ್ಲಿ ರಾಜ್ಯ ಮಂಚೂಣಿಯಲ್ಲಿದೆ . ಕೈಗಾರಿಕೆ ಹಾಗೂ ಉದ್ದಿಮೆ ಸ್ಥಾಪನೆ ಮಾಡಲು ಹೆಚ್ಚಿನ ಸವಲತ್ತು ಹಾಗೂ ಸಹಾಯಧನವನ್ನು ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ನೀಡಲಾಗಿದೆ . ಮಹಿಳಾ ಉದ್ದಿಮೆದಾರರಿಗೆ ಆರ್ಥಿಕ ಸಹಾಯವನ್ನು ಘೋಷಿಸಲಾಗಿದೆ . ನಗರದಲ್ಲಿ ಎಫ್.ಎಂ.ಜಿ.ಸಿ. ಕ್ಲಸ್ಟರ್ ಸ್ಥಾಪನೆಗೆ ವಿಶೇಷ ಪ್ರೋತ್ಸಾಹ ನೀಡಿದ್ದು , ಒಂದು ಲಕ್ಷ ಉದ್ಯೋಗ ಅವಕಾಶಗಳು ಸೃಷ್ಠಿಯಾಗಲಿವೆ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು .
ಆನ್ ಇವನಿಂಗ್ ವಿಥ್ ಲೆಜೆಂಡ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು , ಬಿಯಾಂಡ್ ಬೆಂಗಳೂರು ಆಲೋಚನೆಗೆ ಒತ್ತು ನೀಡಿದ್ದು , ಬೆಂಗಳೂರು ಹೊರತಾಗಿ ರಾಜ್ಯದ ವಿವಿಧ ನಗರಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ . ಗುಜರಾತ್ ಮಾದರಿಯಲ್ಲಿ ವಿಶೇಷ ಹೂಡಿಕೆ ವಲಯವನ್ನು ಸ್ಥಾಪಿಸಿ , ರಿಯಾಯಿತಿಗಳನ್ನು ಸಹ ನೀಡಲಾಗಿದೆ . ಚೆನ್ನೈ ಬೆಂಗಳೂರು ಹಾಗೂ ಚಿತ್ರದುರ್ಗ ಹಾಗೂ ಬೆಳಗಾವಿ ನಡುವಿನ ರಾಷ್ಟ್ರೀಯ ಹೆದ್ದಾರಿಯ ಅಕ್ಕಪಕ್ಕದಲ್ಲಿ ಕೈಗಾರಿಕಾ ಟೌನ್ಶಿಪ್ ನಿರ್ಮಿಸಲಾಗುವುದು ಎಂದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

