ಗೋವಾ : ಬಿಜೆಪಿ ನಾಯಕ ಪ್ರಮೋದ್ ಸಾವಂತ್ ಅವರು ಗೋವಾದ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಪಣಜಿಯ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ . ಪ್ರಧಾನಿ ನರೇಂದ್ರ ಮೋದಿ , ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಗಣ್ಯರು ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ . ಬಿಜೆಪಿ ಆಡಳಿತವಿರುವ 15 ರಾಜ್ಯಗಳ ಮುಖ್ಯಮಂತ್ರಿಗಳೂ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ .
ಮೂರು ಬಾರಿ ಶಾಸಕರಾಗಿದ್ದ ಸಾವಂತ್ ಅವರು , ಇತ್ತೀಚೆಗೆ 40 ಸದಸ್ಯ ಬಲದ ಗೋವಾ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳನ್ನು ಗಳಿಸುವುದರೊಂದಿಗೆ ಗೆಲುವಿನತ್ತ ಮುನ್ನಡೆಸಿದ್ದರು .
bigtvnews | Hubli Dharwad News | Kannada News | Karnataka News Hubli News | News In Hubli | Local news

