Breaking News

ಉತ್ತರ ಕರ್ನಾಟಕಕ್ಕೆ ಹೆಚ್ವಿನ ಆದ್ಯತೆ ನೀಡಲಾಗುತ್ತದೆ; ಸಿಎಂ ಬೊಮ್ಮಾಯಿ

ಹುಬ್ಬಳ್ಳಿ : ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಪರೀಕ್ಷೆಗೆ ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ ಪರೀಕ್ಷೆ ಬರೆಯಿರಿ. ವಿದ್ಯಾರ್ಥಿಗಳು ಮುಂದಿನ ತಮ್ಮ ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಮಾತನಾಡಿದ ಅವರು, ಹಿಜಾಬ್ ವಿಚಾರ ಕೋರ್ಟ್ ನಲ್ಲಿ ತೀರ್ಪು ಬಂದಿದೆ. ತೀರ್ಪು ಬಂದ ನಂತರ ವಿವಾದಾತ್ಮಕ ಹೇಳಿಕೆ ನೀಡುವ ಅವಶ್ಯಕತೆ ಇಲ್ಲ.

30 ರಂದು ಬಜೆಟ್ ಅಧಿವೇಶನ ಮುಗಿಯುತ್ತೇ, ಎಲ್ಲವೂ ಅನುಷ್ಠಾನಕ್ಕೆ ಬರುವಂತೆ ಸೂಚನೆ ನೀಡಿದ್ದೇನೆ. ಹಣಕಾಸಿನ ನೆರವು ಆಗಬೇಕು ಅನ್ನೋ ನಿಟ್ಟಿನಲ್ಲಿ ಸಮಿತಿ ರಚನೆ ಆಗಿದೆ ಎಂದರು.

ಅಂತರಾಜ್ಯ ಜಲ ವಿವಾದ ಶೀಘ್ರದಲ್ಲೇ ಬಗೆಹರಿಯುತ್ತೆ, ಕಾನೂನಾತ್ಮಕ ರೀತಿಯಲ್ಲಿ ಕೆಲವು ನ್ಯಾಯಲಯಗಳಿಂದ ನಮಗೆ ಪರಿಹಾರ ಕಂಡುಕೊಳ್ಳಬೇಕಿದೆ.
ಕೇಂದ್ರದಿಂದ ಸಹ ಹಲವು ಅನುಮತಿ ಗೆ ಸಿದ್ಧತೆ ಮಾಡಿಕೊಳ್ಳಲು ಹೇಳಿದ್ದೇನೆ. ಕೈಗಾರಿಕೆಯ ಕಾರ್ಯಗತ ಆಗಲು ಜಮೀನು ನೀಡಲು ಉತ್ತರ ಕರ್ನಾಟಕಕೆ ಹೆಚ್ಚಿನ ಮಹತ್ವ ಕೊಡುತ್ತಿದ್ದೇವೆ.ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.
ಈಗಾಗಲೇ ಜಯದೇವ ಹೃದಯ ಸಂಸ್ಥೆ ತರುವ ನಿಟ್ಟಿನಲ್ಲಿ ಗವರ್ನಿಂಗ್ ಕೌನ್ಸ್ಲಿಂಗ್ ನಲ್ಲಿ ಹೇಳಲಾಗಿದೆ.ಡಿಸಿ ಗೆ ಸಹ ಜಾಗದ ಬಗ್ಗೆ ಆದಷ್ಟು ಬೇಗ ಹುಡುಕಿ ಅಂತ ಹೇಳಿದ್ದೇನೆ.

ರೈಲ್ವೆ, ಸ್ಪೋರ್ಟ್ಸ್ ಬಗ್ಗೆ ಈಗಾಗಲೇ ವಿಶೇಷ ಅಭಿವೃದ್ಧಿ ತರಲು ಚಿಂತನೆ ಮಾಡಿದ್ದೇವೆ. ಇದು ಅಭಿವೃದ್ಧಿ ಕಾಲ ಆಗಿರುವುದರಿಂದ ಆದಷ್ಟು ಬೇಗ ಅಭಿವೃದ್ಧಿಗೆ ವೇಗ ಹೆಚ್ಚಲಿದೆ.
ಎರಡು ವರ್ಷಗಳ ಕಾಲ ಕೋವಿಡ್ ಇದ್ದ ಕಾರಣ ಯಾವುದೇ ಅಭಿವೃದ್ಧಿ ಆಗಿಲ್ಲ. ಇದೀಗ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಿದ್ದೇವೆ ಎಂದರು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *