Breaking News

ಕಾಂಗ್ರೆಸ್ ಪಕ್ಷ ಮತ್ತೇ ಅಧಿಕಾರಕ್ಕೆ : ಡಾ. ಕೊಟಗಿ


ಹುಬ್ಬಳ್ಳಿ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎಂ.ಬಿ.ಪಾಟೀಲ್ ಪಾಟೀಲ್ ಅವರ ಪ್ರಚಾರದ ಸಾರಥ್ಯದಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಗಳಿಸುವ ಮೂಲಕ ಮತ್ತೇ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಧುರೀಣರಾದ ಡಾ. ಶರಣಪ್ಪ ಕೊಟಗಿ ಹೇಳಿದರು.

ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಧಿಕಾರ ವಹಿಸಿದ ಎಂ.ಬಿ.ಪಾಟೀಲ್ ಅವರನ್ನು ಮಾಜಿ ವಿಧಾನ ಪರಿಷತ್ ಸಭಾಪತಿ ವೀರಣ್ಣ ಮತ್ತಿಕಟ್ಟಿ ಅವರ ನೇತೃತ್ವದಲ್ಲಿ ಭೇಟಿಯಾಗಿ, ಸನ್ಮಾನಿಸದ ಸಂದರ್ಭದಲ್ಲಿ ಮಾತನಾಡಿದ ಅವರು, ಇಡೀ ಉತ್ತರ ಕರ್ನಾಟಕದಲ್ಲಿ ತಮ್ಮ ಬಿ.ಎಲ್.ಡಿ.ಇ ಶಿಕ್ಷಣ ಸಂಸ್ಥೆ ಹಾಗೂ ವೈದ್ಯಕೀಯ ಕ್ಷೇತ್ರದ ಮೂಲಕ ಎಲ್ಲರ ಮನೆ ಮಾತಾಗಿರುವ ಎಂ.ಬಿ.ಪಾಟೀಲ್ ಸಾರಥ್ಯದಲ್ಲಿನ ವ್ಯಾಪಕ ಪ್ರಚಾರದಿಂದ ಕಾಂಗ್ರೆಸ್ ಮತ್ತೇ ಅಧಿಕಾರಕ್ಕೆ ಬರುವುದರಲ್ಲಿ ಸಂಶವೇ ಇಲ್ಲ. ಅಂತಹ ಶಕ್ತಿ ಅವರಲ್ಲಿದೆ ಎಂದರು.

ಈ ವೇಳೆ ಮಾಜಿ ಸಂಸದ. ಐ.ಜಿ.ಸನದಿ, ಮಾಜಿ ಶಾಸಕ ಜಿ.ಎಚ್, ಗಡ್ಡದೇವರಮಠ, ಮುಖಂಡರಾದ ಆನಂದ ಗಡ್ಡದೇವರಮಠ, ಬಸನಗೌಡ ಬಾದಲಿ, ಪ್ರಕಾಶಗೌಡ ಪಾಟೀಲ್, ಶಾಕೀರ್ ಸನದಿ, ರಾಜಶೇಖರ ಮೆಣಸಿನಕಾಯಿ, ಬಂಗಾರೇಶ ಹಿರೇಮಠ, ಸುರೇಶ ಸವಣೂರು, ರಾಜಣ್ಣ ಬಾಗೇವಾಡಿ, ಪಾಟೀಲ್
ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *