Breaking News

ಸೇವಾ ಭದ್ರತೆ ವಿಲ್ಲ ಎಂದು ಆರೋಪಿಸಿ ಡಾಟಾ ಆಪರೇಟರ್ ಸಿಬ್ಬಂದಿಗಳು ಪ್ರತಿಭಟನೆ

ಹುಬ್ಬಳ್ಳಿ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಡಾಟಾ ಆಪರೇಟರ್ ಗಳಾಗಿ ಕಾರ್ಯನಿರ್ವಹಿಸೋ ಸಿಬ್ಬಂದಿ. ಕಳೆದ ಹದಿನೈದು ಇಪ್ಪತ್ತು ವರ್ಷಗಳಿಂದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 150 ಕ್ಕೂ ಅಧಿಕ ಜನ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದಾರೆ.

ಆದ್ರೆ ಕಳೆದ ಹತ್ತಾರು ವರ್ಷಗಳಿಂದಲೂ ಕಾರ್ಯನಿರ್ವಹಿಸೋ ಇವ್ರಿಗೆ ಸರ್ಕಾರ ಮಾತ್ರ ಇನ್ನೂ ಯಾವುದೇ ಸೇವಾ ಭದ್ರತೆ ನೀಡದೇ ದುಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ. ಹೀಗಾಗಿ ಕಳೆದ 15-20 ವರ್ಷಗಳಿಂದ ಕೆಲಸ ಮಾಡುತ್ತಿರೋ ನಮಗೆ ಹೊರಗುತ್ತಿಗೆ ಆಧಾರದಿಂದ ಮುಕ್ತಿಕೊಡಿಸಿ ನಮ್ಮನ್ನ ಖಾಯಂ ನೌಕರರನ್ನಾಗಿ ಮಾಡಿ ಅಂತಾ ಆಗ್ರಹಿಸುತ್ತಿದ್ದಾರೆ.

ಕೇವಲ ಹುಬ್ಬಳ್ಳಿ ಧಾರವಾಡ ಅಷ್ಟೇ ಅಲ್ದೆ, ಬೆಳಗಾವಿ, ಗದಗ ವಿಜಯಪುರ ಸೇರಿದಂತೆ ಹತ್ತಕ್ಕೂ ಅಧಿಕ ಜಿಲ್ಲೆಗಳ ಪಾಲಿಕೆಯಲ್ಲಿ 500 ಕ್ಕೂ ಅಧಿಕ ಜನ ಡಾಟಾ ಆಪರೇಟರ್ ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಹಲವು ವರ್ಷಗಳಿಂದಲೂ ಕೇವಲ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರೋ ಈ ಸಿಬ್ಬಂಧಿಗೆ ಈವರೆಗೂ ಸರ್ಕಾರದಿಂದ ಯಾವುದೇ ಸೇವಾಭದ್ರತೆಯಾಗಲಿ, ಸೌಲಭ್ಯಗಳಾಗಲಿ ನೀಡಿಲ್ಲ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *