ಬೆಂಗಳೂರು: ಮಾ. 31 ರಂದು ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರು ಶ್ರೀ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿ ಕಾರ್ಯಕ್ರಮ ನಿಮಿತ್ತ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಬೆಂಗಳೂರಿಗೆ ಬಂದು ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿ ಬಿಬಿಎಂಪಿ ವ್ಯಾಪ್ತಿ ನಾಯಕರನ್ನು ಭೇಟಿ ಮಾಡಲಿದ್ದಾರೆ. ನಂತರ ಏ.1 ರಂದು ಎಲ್ಲ ಶಾಸಕರು, ಮಾಜಿ ಶಾಸಕರು, 2018 ರ ಚುನಾವಣೆ ಪರಾಜಿತ ಅಭ್ಯರ್ಥಿಗಳು, ಸಂಸತ್ ಚುನಾವಣೆ ಪರಾಜಿತ ಅಭ್ಯರ್ಥಿಗಳು, ಮಾಜಿ ಸಂಸದರು, ವಿವಿಧ ಘಟಕಗಳ ಅಧ್ಯಕ್ಷರ ಜತೆ ಸಭೆ ಮಾಡಲಿದ್ದಾರೆ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

