ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಯಂತೆ ಪ್ರತಿ ಮನೆಗೆ ವರ್ಷಕ್ಕೆ 3 ಎಲ್ ಪಿಜಿ ಸಿಲಿಂಡರ್ ಉಚಿತವಾಗಿ ನೀಡುವ ಯೋಜನೆಗೆ ಗೋವಾ ಸಚಿವ ಸಂಪುಟ ಅನುಮೋದನೆ ನೀಡಿದೆ .
ಏಪ್ರಿಲ್ ತಿಂಗಳಿನಿಂದ ಈ ಯೋಜನೆಗೆ ಜನರಿಗೆ ಲಭ್ಯವಾಗಲಿದೆ . ” ನಾವು ನಮ್ಮ ಪ್ರಣಾಳಿಕೆಯಲ್ಲಿ ಜನರಿಗೆ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಲು ಬದ್ಧವಾಗಿದ್ದೇವೆ ‘ ಎಂದು ಎರಡನೇ ಬಾರಿಗೆ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿರುವ ಪ್ರಮೋದ್ ಸಾವಂತ್ ಹೇಳಿದ್ದಾರೆ . ಮುಂದಿನ ಮೂರು ವರ್ಷ ಪೆಟ್ರೋಲ್ -ಡೀಸೆಲ್ ಮೇಲಿನ ರಾಜ್ಯದ ತೆರಿಗೆಯನ್ನು ಏರಿಕೆ ಮಾಡುವುದಿಲ್ಲ , ಪಿಂಚಣಿ ಹಣವನ್ನು 3 ಸಾವಿರ ರೂಪಾಯಿಗೆ ಏರಿಸುವುದು ಸೇರಿದಂತೆ ಹಲವು ಭರವಸೆಗಳನ್ನು ಬಿಜೆಪಿ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

