Breaking News

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ: ಮೊಹಮ್ಮದ್ ಹ್ಯಾರಿಸ್ ನಲಪಾಡ್

ಮಂಗಳೂರು: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಕೊಡುಗೆ ನೀಡಿ ಬಲಿದಾನ ಮಾಡಿರುವ ಚರಿತ್ರೆ ಕಾಂಗ್ರೆಸ್ ಪಕ್ಷಕ್ಕೆ ಇದೆ. ‘ಕಾಂಗ್ರೆಸ್ ಮುಕ್ತ ಭಾರತ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ’ ಎಂದು ಕಾಂಗ್ರೆಸ್ ರಾಜ್ಯ ಯುವ ಘಟಕದ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ವಿಶ್ವಾಸ ವ್ಯಕ್ತಪಡಿಸಿದರು.

ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಮೇಲೆ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದ ಅವರು, ನಗರದ ಸೇಂಟ್ ಸೆಬಾಸ್ಟಿಯನ್ ಸಭಾಂಗಣದಲ್ಲಿ ಆಯೋಜಿಸಿದ್ದ ಯುವ ಜಾಗೃತಿ ಸಮಾವೇಶದಲ್ಲಿ ಮಾತನಾಡಿದರು. ಆಗ ಬಿಜೆಪಿ, ಆರ್‌ಎಸ್‌ಎಸ್, ಎಸ್‌ಡಿಪಿಐ, ಪಿಎಫ್‌ಐಯಂತಹ ಯಾವುದೇ ಪಕ್ಷ ಅಥವಾ ಸಂಘಟನೆ ಇರಲಿಲ್ಲ. ಈಗ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತಿದ್ದಾರೆ. ಯಾರಿಂದಲೂ ಇದು ಸಾಧ್ಯವಿಲ್ಲ ಎಂದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *