Breaking News

ಈಶ್ವರಪ್ಪ‌ ಕುರಿತು ತನಿಖೆ ನಡೆಸುವಂತೆ ಪೊಲೀಸರಿಗೆ ಕೋರ್ಟ್ ಆದೇಶ


ಶಿವಮೊಗ್ಗ: ನಗರದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣ ಸಂಬಂಧ ಈಶ್ವರಪ್ಪ ಪ್ರಚೋಧನಾಕಾರಿ ಹೇಳಿಕೆ ಸಂಬಂದ ಖಾಸಗಿ ದೂರು ದಾಖಲಾಗಿತ್ತು. ಇದೀಗ ಸಚಿವ‌ ಈಶ್ವರಪ್ಪ‌ ತನಿಖೆ ನಡೆಸುವಂತೆ ಶಿವಮೊಗ್ಗದ‌ ದೊಡ್ಡಪೇಟೆ ಪೊಲೀಸರಿಗೆ ಕೋರ್ಟ್ ಆದೇಶ ನೀಡಿದೆ.

ಹರ್ಷ ಹತ್ಯೆ ನಂತರ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಶಿವಮೊಗ್ಗ ಪಾಲಿಕೆ ಸದಸ್ಯ ಚನ್ನಬಸಪ್ಪ ರಿಂದ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು. ಮುಸಲ್ಮಾನ ಗೂಂಡಾಗಳನ್ನು ಬಿಡುವುದಿಲ್ಲ , ಅವರನ್ನು ದಮನ ಮಾಡುತ್ತೇವೆ ಎಂದು ಈಶ್ವರಪ್ಪ ಅವರು ಹೇಳಿಕೆ ನೀಡಿದ್ದು. ಈ ಹೇಳಿಕೆಯೇ ಗಲಭೆಗೆ ಮುಖ್ಯ ಕಾರಣವಾಗಿದ್ದರಿಂದ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ಶಿವಮೊಗ್ಗ ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿ ಸಲ್ಲಿಸಲಾಗಿತ್ತು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *