Breaking News
Featured Video Play Icon

ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿಯಾಗಿರುವೆ : ಪಾಟೀಲ್..


ಹುಬ್ಬಳ್ಳಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹು-ಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯಲು ಇಚ್ಛಿಸಿದ್ದು, ನಾನು ಕೂಡಾ ಪ್ರಬಲ ಆಕಾಂಕ್ಷಿಯಾಗಿದ್ದೇನೆಂದು ಕಾಂಗ್ರೆಸ್ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಅನಿಲಕುಮಾರ್ ಪಾಟೀಲ್ ಹೇಳಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಸೃಷ್ಟಿಯಾಗಿರುವ ಗೊಂದಲವನ್ನು ನಿವಾರಿಸುವಂತೆ ವರಿಷ್ಠರಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ನವಲಗುಂದ ಪುರಸಭೆಯಲ್ಲಿ ಕಾಂಗ್ರೆಸ್ ಬಿಜೆಪಿಯೊಂದಿಗೆ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ಎಂತಹ ಪರಿಸ್ಥಿತಿ ಎದುರಾದರೂ ಕೋಮುವಾದಿ ಬಿಜೆಪಿ ಪಕ್ಷದೊಂದಿಗೆ ಕೈ ಜೋಡಿಸುವುದಿಲ್ಲ. ನವಲಗುಂದ ಅಧ್ಯಕ್ಷರ ಚುನಾವಣೆ ಸಂದರ್ಭದಲ್ಲಿಯೇ ಬಿಜೆಪಿಯವರೇ ಕಾಂಗ್ರೆಸ್ ಅಭ್ಯರ್ಥಿಗೆ ಮತಚಲಾಯಿಸಿದ್ದಾರೆ. ಆ ಸಂದರ್ಭದಲ್ಲಿ ಯಾವುದೇ ಒಪ್ಪಂದ ಮಾಡಿಕೊಂಡಿರಲಿಲ್ಲ. ಇದೀಗ 17 ಸದಸ್ಯರ ಬಹುಮತ ಕಾಂಗ್ರೆಸ್ ಗೆ ಇದ್ದು, ನಮ್ಮ ಪಕ್ಷದ ಅಭ್ಯರ್ಥಿಯೊಬ್ಬರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಲಿದ್ದಾರೆ ಎಂದರು.

ಇನ್ನು ಈ ಹಿಂದೆ ಕಾಂಗ್ರೆಸ್ ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದರೇ ಆಗಲೇ ಧ್ವನಿ ಎತ್ತಬೇಕಿತ್ತು. ಆದರೆ ಜೆಡಿಎಸ್ ನವರು ಅಧಿಕಾರಕ್ಕೆ ಬರಬಾರದೆಂದು ನಮಗೆ ಬೆಂಬಲ ನೀಡಿದ್ದಾರೆ ಹೊರತು ನಮ್ಮ ಪಕ್ಷದ ಯಾವುದೇ ಸದಸ್ಯರು ಬಿಜೆಪಿಯೊಂದಿಗೆ ಕೈಜೋಡಿಸಿಲ್ಲ. ಹಾಗಾಗಿ ಇದೀಗ ಅವರೊಂದಿಗೆ ಕೈಜೋಡಿಸಿದರೇ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್.ಟಿ ಅಧ್ಯಕ್ಷ ನಾಗರಾಜ್ ಹೆಗ್ಗನವರ, ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷ ರೋಹಿತ್ ಘೋಡಕೆ, ಬಿಸ್ತು ಬೆಳಗಾಂಕರ್, ಬಸವರಾಜ ಇದ್ದರು.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *