ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಮಲ್ಲೇಶ್ವರದ ಬಿಜೆಪಿ ಕಚೇರಿಗೆ ಭೇಟಿ ನೀಡುತ್ತಿರುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಮಲ್ಲೇಶ್ವರದ ಕೆಲ ರಸ್ತೆಗಳಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ.
ಅಮಿತ್ ಶಾ ಅವರು ಮಲ್ಲೇಶ್ವರದ ಸಂಪಿಗೆ ರಸ್ತೆ, ಮಾರ್ಗೋಸಾ ರಸ್ತೆ, 18ನೇ ಅಡ್ಡ ರಸ್ತೆ, 15ನೇ ಅಡ್ಡರಸ್ತೆ, 4ನೇ ಮುಖ್ಯರಸ್ತೆ, 2ನೇ ಟೆಂಪಲ್ ಸ್ಟ್ರೀಟ್ ರಸ್ತೆಗಳಲ್ಲಿ ಸಂಚರಿಸಲಿದ್ದಾರೆ. ಈ ರಸ್ತೆಗಳಲ್ಲಿ ಹೆಚ್ಚಿನ ಅಂಗಡಿಗಳು, ಶಾಲಾ-ಕಾಲೇಜುಗಳು ಹಾಗೂ ಇತರೆ ವ್ಯಾಪಾರಿ ಮಳಿಗೆಗಳು ಇರುವುದರಿಂದ ಇಲ್ಲಿಗೆ ಬರುವವರು ರಸ್ತೆಗಳಲ್ಲಿ ವಾಹನ ನಿಲುಗಡೆ ಮಾಡುತ್ತಾರೆ. ಇದರಿಂದ ಗಣ್ಯ ವ್ಯಕ್ತಿಗಳ ಸಂಚಾರಕ್ಕೆ ಅಡಚಣೆ ಆಗುವುದರಿಂದ ಗಣ್ಯ ವ್ಯಕ್ತಿಗಳು ಬಂದು ಹೋಗುವವರೆಗೂ (ಬೆಳಗ್ಗೆ 6ರಿಂದ) ಈ ರಸ್ತೆಗಳ ಎರಡೂ ಬದಿಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

