Breaking News

ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆ


ಶಿವಮೊಗ್ಗ :ಹಳೆ ದ್ವೇಷದ ಹಿನ್ನೆಲೆಯಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ ಮಾಡಿದ ಘಟನೆ ಶಿವಮೊಗ್ಗದ ಕೆಎಸ್‌ಆರ್ಟಿಸಿ ಬಸ್ ನಿಲ್ದಾಣ ಸಮೀಪ ನಡೆದಿದೆ.

ಕುಶನ್ ಚಂದು(29) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಪರಶುರಾಮ ಎಂಬಾತ ಕೃತ್ಯವೆಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ರಾತ್ರಿ ಕುಶನ್ ಚಂದು ಸ್ನೇಹಿತನೊಂದಿಗೆ ಹೋಟೆಲ್ ಗೆ ಊಟಕ್ಕೆ ತೆರಳಿದ್ದ ವೇಳೆಯಲ್ಲಿ ಪರಶುರಾಮನೊಂದಿಗೆ ಜಗಳವಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಜಗಳದ ವೇಳೆ ಪರಶುರಾಮ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ.ದೊಡ್ಡಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share News

About admin

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *