Breaking News

ರಾಜ್ಯದಲ್ಲಿ ಬಿಜೆಪಿ ಸರ್ಕಾರ ವಿರುದ್ಧ ರೊಚ್ಚಿಗೆದ್ದ ಎಸ್ ಡಿ ಪಿ ಐ

ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅರಾಜಕತೆ ಸೃಷ್ಟಿ ಮಾಡಿದೆ ಎಂದು ಆರೋಪಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ. ರಾಜ್ಯದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ,ಹಲಾಲ್ ಮಾಂಸದ ಬಹಿಷ್ಕಾರ,ಇದರಲ್ಲೂ ಸರ್ಕಾರದ ಕೈವಾಡವಿದೆ ಎಂದು ಆರೋಪಿಸಿದರು .ಹಾಗೂ ಸರ್ಕಾರಿ ಶಾಲೆಗಳಲ್ಲಿ ಭಗವದ್ಗೀತೆ ಹೇರುವ ಹುನ್ನಾರ ಮಾಡಿದ್ದು,ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. ಕೊಲೆಯಾದ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ,ಹಾಗೂ ಟಿಪ್ಪುಸುಲ್ತಾನ್ ಸಾಧನೆಗಳನ್ನು ಪಠ್ಯಪುಸ್ತಕದಿಂದ ಕೈಬಿಡುವ ಹುನ್ನಾರವನ್ನು ಸರಕಾರ ಮಾಡುತ್ತಿದೆ ಎಂದು ಆರೋಪಿಸೆ ಆಕ್ರೋಶಗೊಂಡರು. ಪ್ರತಿಭಟನೆಯಲ್ಲಿ ಸಮೀರ್ ಬೆಟಗೇರಿ, ಇಸ್ಮಿಲ್ ನಾಲಬಂದ, ಅಜಂ ಪಠಾಣ್ , ಮಹ್ಮದ್ ರಫೀಕ್, ಹಮಿದ ಬಂಗಾಲಿ ಭಾಗಿಯಾಗಿದ್ದರು.

Share News

About admin

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *