Breaking News

ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಶಿವಲಿಂಗವನ್ನು ಸ್ಪರ್ಶಿಸಿದ ಸೂರ್ಯ ರಶ್ಮಿ

ಹುಬ್ಬಳ್ಳಿ : ನಗರದ ಉಣಕಲ್ ನ ಚಂದ್ರಮೌಳೇಶ್ವರ ದೇವಸ್ಥಾನದಲ್ಲೂ ಯುಗಾದಿ ಸಂಭ್ರಮ ಕಳೆಗಟ್ಟಿದ್ದು ಇಂದು ಮುಂಜಾನೆಯ ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸುವ ಘಳಿಗೆಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ.

ಶತಮಾನಗಳಷ್ಟು ಹಳೆಯದಾದ ಚಂದ್ರಮೌಳೇಶ್ವರನ ದರ್ಶನ ಪಡೆದರೆ ಇಷ್ಟಾರ್ಥಗಳು ಈಡೇರುತ್ತದೆ ಎಂಬ ನಂಬಿಕೆ ಇಲ್ಲಿನ ಜನರದ್ದಾಗಿದೆ. ಈ ಹಿನ್ನೆಲೆಯಲ್ಲಿ ಯುಗಾದಿ ದಿನದಂದು ದೇವಸ್ಥಾನಕ್ಕೆ ಭೇಟಿ ನೀಡಿ ಸೂರ್ಯ ರಶ್ಮಿ ಶಿವಲಿಂಗ ಸ್ಪರ್ಶಿಸುವುದರ ದರ್ಶನ ಪಡೆಯುತ್ತಾರೆ. ಇದು 12 ನೇ ಶತಮಾನದಲ್ಲಿ ಚಾಲುಕ್ಯರ ಕಾಲದಲ್ಲಿ ಕಟ್ಟಲಾದ ದೇವಸ್ಥಾನವಾಗಿದ್ದು, ಚತುರ್ಮುಖ ಶಿವಲಿಂಗ ಇಲ್ಲಿನ ವಿಶೇಷವಾಗಿದೆ. ಯುಗಾದಿ ಹಬ್ಬದ ದಿನ ಬೆಳಗ್ಗೆ 6-45 ರಿಂದ 7 ಗಂಟೆಯವರೆಗೆ ಈ ಚತುರ್ಮುಖ ಲಿಂಗದ ಮೇಲೆ ಸೂರ್ಯರಶ್ಮಿ ಬೀಳುವುದು ವಿಶೇಷವಾಗಿದೆ. ಈ ಸಂದರ್ಭದಲ್ಲಿ ಅನೇಕ ಭಕ್ತರು ದೇವರ ದರ್ಶನ ಪಡೆದು ಧನ್ಯರಾಗುತ್ತಾರೆ.

Share News

About admin

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *