ಬೆಂಗಳೂರು : ಪೊಲೀಸ್ ಕಲ್ಯಾಣ ನಿಧಿಗೆ 5 ಕೋಟಿ ರೂ.ಗಳನ್ನು ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಘೋಷಿಸಿದರು.
ಇಂದು ಕೋರಮಂಗಲದ ಪೊಲೀಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಗತಿಪರ ಸಮಾಜ, ಮಹಿಳೆಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸಲು ಪೊಲೀಸರ ನಿಷ್ಠೆ, ದಕ್ಷತೆಯಿಂದ ಸಾಧ್ಯವಿದೆ. ಅಪರಾಧ, ಅಪರಾಧಿಗಳೊಂದಿಗೆ ರಾಜಿಯಿಲ್ಲದೆ ಕೆಲಸ ಮಾಡಿದರೆ ಅಪರಾಧ ತನ್ನಿಂದ ತಾನೇ ಕಡಿಮೆಯಾಗುತ್ತದೆ. ರಾಜ್ಯ ಸರ್ಕಾರಕ್ಕೆ ನಿಮ್ಮ ಸೇವೆಗಳ ಬಗ್ಗೆ ಹೆಮ್ಮೆ ಇದೆ. ರಾಷ್ಟ್ರದಲ್ಲಿ ಕರ್ನಾಟಕ ಪೊಲೀಸ್ ನಂಬರ್ 1 ಸ್ಥಾನಕ್ಕೆ ಏರಲಿ ಎಂದರು.
ಕಲ್ಯಾಣ ಕಾರ್ಯಕ್ರಮ: ಪೊಲೀಸರ ಕಾರ್ಯದಲ್ಲಿ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ. ಪೊಲೀಸ್ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದೆ. ಆರೋಗ್ಯ, ಸೇವೆ, ಬಂದೋಬಸ್ತಿಗೆ ಭತ್ಯೆ, ಬಡ್ತಿಗಳನ್ನು ನೀಡಿದೆ. ಪೊಲೀಸ್ ಗೃಹ ಯೋಜನೆಯಡಿ 10 ಸಾವಿರಕ್ಕೂ ಹೆಚ್ಚು ಮನೆಗಳ ನಿರ್ಮಾಣಕ್ಕೆ ಅನುಮೋದನೆ ಹಾಗೂ ಅನುದಾನ ನೀಡಿದೆ. ಪೊಲೀಸರ ಆರೋಗ್ಯಕ್ಕಾಗಿ 100 ಕೋಟಿ ರೂ.ಗಳನ್ನು ಮೀಸಲಿರಿಸಿದೆ. ಪೊಲೀಸರ ದಕ್ಷತೆಗೆ ಅನುಗುಣವಾಗಿ ಅವರ ಕಲ್ಯಾಣ ಕಾರ್ಯಕ್ರಮಗಳಿಗೆ ವೇಗವಾಗಿ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

