ಹುಬ್ಬಳ್ಳಿ : ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ರಿಂದ ಆಕರ್ಷಕ ಪಥಸಂಚಲನ ನಡೆಯಿತು. ನಿವೃತ್ತ ಪೊಲೀಸ್ ಇನ್ಸ್‌ಪೆಕ್ಟರ್ ಗಳಾದ ಅನಿಲ ಕುಲಕರ್ಣಿ ಹಾಗೂ ಅರುಣ ಕುಮಾರ ಸಾಳುಂಕೆ ಅವರು ವಂದನೆ ಸ್ವೀಕರಿಸಿದರು.

ಸಂತೋಷ ಭೋಜಪ್ಪಗೋಳ ಅವರು ಪೊಲೀಸ್ ಪಡೆಗಳ ಪಥ ಸಂಚಲನದ ನೇತೃತ್ವ ವಹಿಸಿದ್ದರು. ಎಡ್ವೀನ್ ಡಿಸೋಜಾ ಅವರ ನೇತೃತ್ವದಲ್ಲಿ ಪೊಲೀಸ್ ಬ್ಯಾಂಡ್ ಪಥ ಸಂಚಲನ ನಡೆಸಿತು. ಆರ್ ಎಸ್ ಐ ಭಾಗಣ್ಣ ವಾಲೀಕಾರ ಅವರು ರಾಷ್ಟ್ರ ಧ್ವಜದ ಬೆಂಗಾವಲು ವಹಿಸಿದ್ದರು. ಈ ಸಂಧರ್ಭದಲ್ಲಿ ಪೊಲೀಸ್ ಆಯುಕ್ತ ಲಾಬೂರಾಮ್ ಹಾಗೂ ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

