Breaking News

ಭಾಸ್ಕರ್‌ ರಾವ್ ನಿವೃತ್ತಿ : ಭಾವನಾತ್ಮಕವಾಗಿ ಟ್ವೀಟ್


ಬೆಂಗಳೂರು: ಎಡಿಜಿಪಿ ಭಾಸ್ಕರ್‌ ರಾವ್ ಸ್ವಯಂ ನಿವೃತ್ತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ. ಈ ಬಗ್ಗೆ ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ.

ಐಪಿಎಸ್‌ನಲ್ಲಿ 32 ವರ್ಷಗಳ ಸೇವೆ ಮುಗಿಸಿದ ನಂತರ ಆಫೀಸ್‍ನಿಂದ ಮನೆಗೆ ನನ್ನ ಕೊನೆಯ ಪ್ರವಾಸ. ನನ್ನ ಸಾರ್ವಜನಿಕ ಜೀವನದಲ್ಲಿ ಇಷ್ಟು ವರ್ಷಗಳ ಕಾಲ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಕರ್ನಾಟಕದ ಜನತೆಗೆ, ನನ್ನ ಎಲ್ಲಾ ಸಹೋದ್ಯೋಗಿಗಳು, ಸ್ನೇಹಿತರು, ಹಿರಿಯರು ಮತ್ತು ಯುವಜನರಿಗೆ ಧನ್ಯವಾದಗಳು. ಪಕ್ಷಾತೀತವಾಗಿ ವಿವಿಧ ಪಕ್ಷಗಳ ಆಡಳಿದಲ್ಲಿದ್ದ ಸರ್ಕಾರಗಳಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿದ್ದಕ್ಕೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

Share News

About admin

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *