Breaking News

ಯುಗಾದಿ ದಿನ ಘೋರ ದುರಂತ : 11 ಜನ ಸಾವು

ಚೆನ್ನೈ: ಕಣಿವೆಗೆ ಉರುಳಿದ ಪರಿಣಾಮ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದ ಘಟನೆ ತಮಿಳುನಾಡಿನ ತಿರುಪತ್ತೂರ್ ಬಳಿಯ ಜವಡುಮಲೈನಲ್ಲಿ ನಡೆದಿದೆ. ಪೊಲೀಸರ ವರದಿ ಪ್ರಕಾರ, ವ್ಯಾನ್‌ನಲ್ಲಿ ಗುಡ್ಡಗಾಡು ಪ್ರದೇಶದಲ್ಲಿದ್ದ ಪುಲಿಯೂರಿನಿಂದ ಸುಮಾರು 20 ಜನರು ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.

ಇವರೆಲ್ಲ ಸೆಂಬರೈ ಪ್ರದೇಶ ಆಂಜನೇಯಾರ್​ ದೇವಸ್ಥಾನದ ಉತ್ಸವದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದರು. ವ್ಯಾನ್ ಪುದುತ್ನಾಡು ಸಮೀಪ ಬರುತ್ತಿದ್ದಂತೆ ಇದ್ದಕ್ಕಿದ್ದಂತೆ 100 ಅಡಿ ಆಳದ ಕಣಿವೆಗೆ ಉರುಳಿ ಬಿದ್ದಿದೆ. 11 ಮಂದಿ ಪ್ರಾಣ ಕಳೆದುಕೊಂಡಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳದಲ್ಲೇ ಆರು ಮಂದಿ ಮೃತಪಟ್ಟರೆ, ಉಳಿದವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯ ಪ್ರಾಣ ಕಳೆದುಕೊಂಡಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಅಪಘಾತದ ಸ್ಥಳಕ್ಕೆ ಬಂದು, ರಕ್ಷಣಾ ಕಾರ್ಯ ಕೈಗೊಂಡರು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Share News

About admin

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *