ಧಾರವಾಡ: ಕ್ರಿಕೆಟ್ ಆಡುವ ವೇಳೆ ಹೃದಯಾಘಾತವಾಗಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಮುನ್ನಾ ಇರ್ಕಲ್ ಎಂಬುವನೇ ಕ್ರಿಕೆಟ್ ಆಡುವ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.
ಮೃತ ಮುನ್ನಾ ಇರ್ಕಲ್ ನಗರದ ಸಂಗೊಳ್ಳಿ ರಾಯಣ್ಣ ನಗರದ ನಿವಾಸಿಯಾಗಿದ್ದಾನೆ ಅಂತ ತಿಳಿದು ಬಂದಿದೆ. ನಗರದ ಕರ್ನಾಟಕ ಕಲಾ ಮಹಾವಿದ್ಯಾಲಯದಲ್ಲಿ ಬೆಳಿಗ್ಗೆ ಕ್ರಿಕೆಟ್ ಆಡುವಾಗ ಮುನ್ನಾ ಇರ್ಕಲ್‌ಗೆ ಹೃದಯಾಘಾತ ಇಹಲೋಕ ತ್ಯಜಿಸಿದ್ದಾನೆ.
ಯುವಕನನ್ನ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯದಲ್ಲಿಯೇ ಸಾವನ್ನಪ್ಪಿದ್ದಾನೆ ಅಂತ ತಿಳಿದು ಬಂದಿದೆ. ಉಪನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

