Breaking News

ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಎಣ್ಣೆ ಏರಿಕೆ ವಿರುದ್ಧ ಆಟೋ ಚಾಲಕರ ಸಂಘದಿಂದ ಪ್ರತಿಭಟನೆ

ಹುಬ್ಬಳ್ಳಿ:-ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಎಣ್ಣೆ ಸೇರಿದಂತೆ ಇತರ ಬೆಲೆ ಏರಿಕೆ ಮಾಡಿರುವ ಸರಕಾರದ ವಿರುದ್ಧ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘದ ವತಿಯಿಂದ ಇಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ಮಾಡಿ ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿಂದು ಪ್ರತಿಭಟನಾ ರ್ಯಾಲಿ ಮಾಡಿದ ಅವರು ಆಟೋ ರಿಕ್ಷಾಗೆ ಬಳಸುವ ಎಲ್.ಪಿ.ಜಿ, ಪೇಟ್ರೋಲ್, ಮನೆ ಸಿಲಿಂಡರ್ ಮತ್ತು ಆರ್.ಟಿ.ಓ ಆಟೋ ನೋಂದಣಿಯನ್ನು ಬೆಲೆ ಹೆಚ್ಚಳ ಮಾಡಿರುವುದರಿಂದ ನಾವೆಲ್ಲರೂ ಹೇಗೆ ಬದುಕಬೇಕು ಎಂದು ಸರಕಾರದ ವಿರುದ್ಧ ಕಿಡಿ ಕಾರಿದರು, ನಗದ ನಿಲಿಜನ ರಸ್ತೆಯಿಂದ ತಹಶಿಲ್ದಾರರ ಕಛೇರಿವರೆಗೂ ಪ್ರತಿಭಟನೆ ಮಾಡಿದ ಕಾರ್ಯಕರ್ತರು, ತಕ್ಷಣವೇ ಎಲ್ಲಾ ಬೆಲೆಗಳು ಇಳಿಯಬೇಕು ಇಲ್ಲವಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿ ತಹಶಿಲ್ದಾರರ ಮುಖಾಂತರ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಿದರು.

Share News

About admin

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *