Breaking News

ಸಾಮಾನ್ಯ ಸಭೆ ಕುರಿತು ಕಾಂಗ್ರೆಸ್ ಬಿಜೆಪಿ ಮಧ್ಯೆ ಮಾತಿನ ವಾಗ್ವಾದ


ನವಲಗುಂದ ಪುರಸಭೆಯಲ್ಲಿ ನಡೆಯುತ್ತಿದ್ದ ಸಾಮಾನ್ಯ ಸಭೆಗೆ ಬಿಜೆಪಿ ಸದಸ್ಯರು ಅಡ್ಡಿಪಡಿಸಿ ,ಸಭೆಗೆ ಅಡ್ಡಿ ಪಡಿಸಿದ ಬಿಜೆಪಿ ಸದಸ್ಯರು ಆಡಳಿತ ಪಕ್ಷದ ಸದಸ್ಯರು ಯಾರು ಎಂದು ಸ್ಪಷ್ಟಪಡಿಸುವಂತೆ ಒತ್ತಾಯಿಸಿದರು.
ನಮ್ಮಬೆಂಬಲದಿಂದ ಚುನಾಯಿತರಾಗಿರುವ ಉಪಾಧ್ಯಕ್ಷರು ರಾಜೀನಾಮೆ ನೀಡಬೇಕು ಎಂದು ಪಟ್ಟು ಹಿಡಿದ ಹಿನ್ನೆಲೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.

ಉಪಾಧ್ಯಕ್ಷರು ರಾಜೀನಾಮೆ ನೀಡಿ , ನಂತರ ಅಧಿಕೃತವಾಗಿ ಮತದಾನ ಮಾಡಿ ಅಧ್ಯಕ್ಷ , ಉಪಾಧ್ಯಕ್ಷ ಆಯ್ಕೆ ಮಾಡಿದ ನಂತರ ಸಾಮಾನ್ಯ ಸಭೆ ನಡೆಸಿ ಎಂದು ಬಿಜೆಪಿ ಸದಸ್ಯರು ಪಟ್ಟು ಹಿಡಿದು ಸಭೆಯಲ್ಲಿಯೇ ಪ್ರತಿಭಟನೆಗೆ ಕುಳಿತರು . 17 ಸದಸ್ಯರ ಬೆಂಬಲವಿದ್ದು ಕೋರಂ ಭರ್ತಿಯಾಗಿದೆ . ನಾವು ಸಾಮಾನ್ಯ ಸಭೆಯನ್ನು ನಡೆಸಿಯೇ ಸಭೆಯಲ್ಲಿ ಗದ್ದಲ ಮಾಡುತ್ತಿರುವ ಬಿಜೆಪಿ ಸದಸ್ಯರನ್ನು ಹೊರ ಹಾಕುವಂತೆ ಕಾಂಗ್ರೆಸ್ ಸದಸ್ಯರು ಮುಖ್ಯಾಧಿಕಾರಿ ವೀರಪ್ಪ ಹಸಬಿಯವರೊಂದಿಗೆ ವಾಗ್ವಾದ ನಡೆಸಿದರು .

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *