Breaking News

ಟ್ರಾಫಿಕ್ ಕ್ಲಿಯರ್ ಮಾಡಲು ಹೋದ ಪೊಲೀಸ ಸ್ಥಳ ದಲೇ ಸಾವು

ಹುಬ್ಬಳ್ಳಿ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾ‌ಮ  ಕಲಘಟಗಿ ಪೊಲೀಸ್ ಠಾಣೆಯ ಪಂಡಿತ ಪೋಲಿಸ್ ಕಾನ್ಸ್ ಸ್ಟೇಬಲ್ ಕಾಸರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯವಾಗಿರುವ  ಘಟನೆ ಬುಡನಾಳ ಕ್ರಾಸ್ ಬಳಿ ನಡೆದಿದೆ.

ನಿನ್ನೆ ಸಾಯಂಕಾಲ ಮಳೆ, ಬಿರುಗಾಳಿಯಿಂದ ರಸ್ತೆಯಲ್ಲಿ ಮರಗಳು‌ ಬಿದ್ದಿದ್ದವು. ಇದರಿಂದ ಹುಬ್ಬಳ್ಳಿ-ಕಾರವಾರ ರಸ್ತೆಯಲ್ಲಿ ಉಂಟಾಗಿತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಕಾನ್ಸ್ ಸ್ಟೇಬಲ್ ಸ್ಥಳದಲ್ಲಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *