Breaking News

ಐರಾವತ ಬಸ್ಸ ಕಾರಿಗೆ ಡಿಕ್ಕಿ: ಸ್ಥಳದಲ್ಲಿ ಇಬ್ಬರ ಸಾವು, ಹಲವರಿಗೆ ಗಂಭೀರ ಗಾಯ

ಹುಬ್ಬಳ್ಳಿ: ಐರಾವತ್ ಬಸ್ಸು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಮೂವರಿಗೆ ತೀವ್ರ ಥರದ ಗಾಯಗಳಾದ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಬಳಿ ನಡೆದಿದೆ.

ಹೈದರಾಬಾದಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಎಕ್ಸಯೂವಿ ವಾಹನದಲ್ಲಿ ಪ್ರಯಾಣಿಸುತ್ತೀದ್ದರು. ಈಗ ಕೆಲವೇ ನಿಮಿಷಗಳ ಹಿಂದೆ ಐರಾವತ್ ಬಸ್ಸಿನ ಚಾಲಕನ ನಿರ್ಲಕ್ಷ್ಯದಿಂದಲೇ ದುರ್ಘಟನೆ ನಡೆದಿದ್ದು, ಗಾಯಾಳುಗಳನ್ನ ಸ್ಥಳೀಯರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಿ, ಜೀವ ಉಳಿಸಿದ್ದಾರೆ.

ಶಿರಗುಪ್ಪಿ ಬಳಿಯ ರಸ್ತೆಯ ಮೊದಲ ತಿರುವಿನಲ್ಲಿಯೇ ರಾಂಗ್ ರೂಟಿಗೆ ಐರಾವತ್ ಬಂದಿದ್ದರಿಂದ ಎದುರಿಗೆ ಬಂದಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬಸ್ಸಿನ ವೇಗ ಹೆಚ್ಚಾಗಿದ್ದರಿಂದ ವಾಹನವೂ ಅಪ್ಪಚ್ಚಿಯಾಗಿದ್ದು, ಸ್ಥಳದಲ್ಲಿಯೇ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಮೃತರ ಬಗ್ಗೆ ಮಾಹಿತಿಯನ್ನ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಕಲೆ ಹಾಕುತ್ತಿದ್ದಾರೆ.

Share News

About admin

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *