Breaking News

ರಾಜ್ಯದ ಅಭಿವೃದ್ಧಿಗೆ ವಿವಿಧ ನಾಯಕರನ್ನು ಭೇಟಿ ಮಾಡಿದ ಸಿಎಂ

ನವದೆಹಲಿ:ರಾಷ್ಟ್ರ ರಾಜಧಾನಿ ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ವಿವಿಧ ಯೋಜನೆ ಮತ್ತು ಸಂಪುಟ ವಿಸ್ತರಣೆಗಳ ಬಗ್ಗೆ ಕೇಂದ್ರ ಸಚಿವರು ಮತ್ತು ಪಕ್ಷದ ಹೈಕಮಾಂಡ್‌ ನಾಯಕರೊಂದಿಗೆ ಮಾತುಕತೆ ನಡೆಸುವ ಸಲುವಾಗಿ ಅವರು ಬುಧವಾರ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್‌, ರಾಜನಾಥ್‌ ಸಿಂಗ್‌, ಧರ್ಮೇಂದ್ರ ಪ್ರಧಾನ್‌, ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ, ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರನ್ನು ಭೇಟಿ ಮಾಡಿದರು.

ಮಂಗಳವಾರ ಅವರು ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್‌ ಶೆಖಾವತ್‌, ಆರ್‌.ಕೆ.ಸಿಂಗ್‌ ಅವರನ್ನು ಭೇಟಿ ಮಾಡಿದ್ದರು. ಬುಧವಾರ ಬೆಳಗ್ಗೆ ದೆಹಲಿ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸಂಸ್ಥಾಪನಾ ದಿನಾಚರಣೆಯಲ್ಲಿ ಅವರು ಭಾಗವಹಿಸಿದ್ದರು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *