Breaking News

ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟಕ್ಕೆ : ಗುರಿಕಾರ ಬೆಂಬಲ

ಧಾರವಾಡ: ಪ್ರತ್ಯೇಕ ಮಹಾನಗರ ಪಾಲಿಕೆ ಮಾಡಬೇಕು ಎಂದು ಆಗ್ರಹಿಸ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ವೇದಿಕೆ ಸದಸ್ಯರು ನಡೆಸುತ್ತಿರುವ ಧರಣಿಗೆ ಕರ್ನಾಟಕ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಬೆಂಬಲ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಹಿಂದೆಯೇ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಮಾಡಬೇಕಿತ್ತು. ವಿಳಂಬ ಆಗಿದೆ. ಈಗಲೂ ಕಾಲ ಮಿಂಚಿಲ್ಲ. ಧಾರವಾಡದ ಜನತೆಯ ಅಳಲನ್ನು ಆಲಿಸಿ ಕೂಡಲೇ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಮಂಜೂರು ಮಾಡಬೇಕು ಎಂದರು.

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ ಭಾಗದವರೇ ಆಗಿದ್ದಾರೆ. ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಅವಶ್ಯಕತೆ ಇದೆ ಎಂಬುದನ್ನು ಅವರು ಮನಗಂಡಿದ್ದಾರೆ. ಇನ್ನು ತಡಮಾಡದೇ ಹುಬ್ಬಳ್ಳಿ, ಧಾರವಾಡ ನಗರಗಳು ಇನ್ನೂ ಹೆಚ್ಚಿನ ರೀತಿಯಲ್ಲಿ ಬೆಳೆಯುವಂತಾಗಲು ಪ್ರತ್ಯೇಕ ಮಹಾನಗರ ಪಾಲಿಕೆ ಅವಶ್ಯಕತೆ ಇದೆ. ಸದ್ಯ ಆರಂಭಗೊಂಡಿರುವ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದರು.

Share News

About admin

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *