Breaking News

ದಾಸಿಮಯ್ಯನವರ ವಚನಗಳು ಸಾಮಾಜಿಕ ಕ್ರಾಂತಿ ಮಾಡಿದ್ದವು

ನವಲಗುಂದ: ಕನ್ನಡದ ಮೊಟ್ಟ ಮೊದಲ ವಚನಕಾರ ಶಿವಶರಣ ದೇವರ ದಾಸಿಮಯ್ಯನವರು ತಮ್ಮ ವಚನಗಳ ಮೂಲಕ ಮಾನವ ಕುಲಕ್ಕೆ ಸನ್ಮಾರ್ಗವನ್ನು ತೋರಿಸಿದ್ದಾರೆ. ಅಂತಹ ಶರಣರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ಸಾಗಬೇಕಾಗಿದೆ ಎಂದು ತಹಶೀಲ್ದಾರ್ ಅನೀಲ ಬಡಿಗೇರ ಸಲಹೆ ನೀಡಿದರು.

ಬುಧವಾರ ತಾಲ್ಲೂಕಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿದ ದೇವರ ದಾಸಿಮಯ್ಯ ಜಯಂತ್ಯುತ್ವದಲ್ಲಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಚಾಲನೆ ನೀಡಿ ಅವರು ಮಾತನಾಡಿದರು. ನೇಕಾರಿಕೆ  ವೃತ್ತಿ ಮಾಡುವವರಿಗೆ ಗುರುದೈವವಾಗಿದ್ದ ಅವರು ಜನಸಾಮಾನ್ಯರಿಗೆ ಅರ್ಥವಾಗುವ ನಿಟ್ಟಿನಲ್ಲಿ ಸಾಹಿತ್ಯ ರಚಿಸುವ ಮೂಲಕ ಸಾಮಾಜಿಕ ಕ್ರಾಂತಿ ಮಾಡಿದ್ದಾರೆಂದು ಹೇಳಿದರು. ರೈತ ಮುಖಂಡ ಲೋಕನಾಥ ಹೆಬಸೂರ, ತಹಶೀಲ್ದಾರ್ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು. 

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *