ಹುಬ್ಬಳ್ಳಿ: ಸಿರಿಧಾನ್ಯಗಳಿಂದ ತಯಾರಿಸಿದ ವಿನೂತನ ಉತ್ಪನ್ನಗಳ ಬಿಡುಗಡೆ ಹಾಗೂ ಗಾಯತ್ರಿ ಇಂಡಸ್ಟ್ರೀಸ್ ಉದ್ಘಾಟನೆ ಸಮಾರಂಭ ಏ.10 ರಂದು ಬೆಳಿಗ್ಗೆ 11 ಕ್ಕೆ ಗಾಯಮಗಟ್ಟಿ ಕೈಗಾರಿಕಾ ಪ್ರದೇಶದ ಮಹಿಳಾ ಉದ್ಯಮಿ ಪಾರ್ಕ್ ನಲ್ಲಿ ಆಯೋಜಿಸಲಾಗಿದೆ ಎಂದು ಗಾಯತ್ರಿ ಇಂಡಸ್ಟ್ರೀಸ್ ಮುಖ್ಯಸ್ಥ ಪ್ರಸನ್ನ ಅನಂತಾಚಾರ್ಯ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಕಾರ್ಖಾನೆ ಉದ್ಘಾಟನೆಯನ್ನು ಆರ್ ಎಸ್ಎಸ್ ನ ಉತ್ತರ ಪ್ರಾಂತದ ಸಹ ಸಂಘಚಾಲಕ ಅರವಿಂದರಾವ್ ದೇಶಪಾಂಡೆ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಉದ್ಘಾಟನೆ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಶಂಕರಪಾಟೀಲ ಮುನೇನಕೊಪ್ಪ, ಶಾಸಕ ಅರವಿಂದ ಬೆಲ್ಲದ, ವಿಪ ಸದಸ್ಯ ಪ್ರದೀಪ್ ಶೆಟ್ಟರ್ ಸೇರಿದಂತೆ ಮುಂತಾದ ಗಣ್ಯಮಾನ್ಯರು ಆಗಮಿಸಲಿದ್ದಾರೆ ಎಂದರು.
ಅಂದು ಗಾಯತ್ರಿ ಇಂಡಸ್ಟ್ರೀಸ್ ನ ಮೇಕ್ ಇಟ್ ಇಸಿ ಹೆಸರಿನಡಿಯ ಒಟ್ಟು ಐದು ಪ್ರಮುಖ ಸರಿಧಾನ್ಯಗಳ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗುವುದು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪೂಜಾ ಕಟ್ಟಿ, ಜಯತೀರ್ಥ ಕಟ್ಟಿ ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

