ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬೆಲೆ ಏರಿಕೆ ನಿಯಂತ್ರಿಸುವ ವಿಷಯದಲ್ಲಿ ವಿಫಲವಾಗಿದ್ದಾರೆ ಅದನ್ನು ಮುಚ್ಚಿಹಾಕಲು ಧರ್ಮದ ಹೆಸರಿನಲ್ಲಿ ಗಲಾಟೆ ಮಾಡಿಸಲಾಗುತ್ತಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.
ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್ ಪಕ್ಷವು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ‘ಬೆಲೆ ಏರಿಕೆ ವಿಷಯದಲ್ಲಿ ಜನರ ಆಕ್ರೋಶ ಹೆಚ್ಚುತ್ತಿದೆ. ವಿಷಯಾಂತರ ಮಾಡುವುದಕ್ಕಾಗಿ ಹಿಜಾಬ್, ಹಲಾಲ್ ಕಟ್ ಹೆಸರಿನಲ್ಲಿ ಗಲಭೆ ಸೃಷ್ಟಿಸುತ್ತಿದ್ದಾರೆ. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುತ್ತಿದ್ದಾರೆ’ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

