ಧಾರವಾಡ: ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಿಂದ ಪುಡಕಲಕಟ್ಟಿ ಮಾರ್ಗವಾಗಿ ಧಾರವಾಡಕ್ಕೆ ಹೊರಟಿದ್ದ ಸಾರಿಗೆ ಸಂಸ್ಥೆ ಬಸ್ ಪಲ್ಟಿಯಾಗಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಕರಡಿಗುಡ್ಡ ಗ್ರಾಮದ ಬಳಿ ಇಂದು ಬೆಳಿಗ್ಗೆ ಸಂಭವಿಸಿದೆ.
ಪುಡಕಲಕಟ್ಟಿ ಬಸ್ಸಿನಲ್ಲಿ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 35-40 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು . ಬಸ್ ಕರಡಿಗುಡ್ಡ ಸಮೀಪ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ . ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

