ಬೆಂಗಳೂರು: ಧಾರವಾಡ ಜಿಲ್ಲೆಯ ನುಗ್ಗಿಕೇರಿಯಲ್ಲಿ ಮುಸ್ಲಿಂ ವ್ಯಾಪ್ಯಾರಿಗಳ ತಳ್ಳುಗಾಡಿ ಧ್ವಂಸ ಮಾಡಿರುವುದಕ್ಕೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು ರಾಮಭಕ್ತರ ಸೋಗಿನಲ್ಲಿ ಬಂದು ಕೃತ್ಯವೆಸಗಿದ್ದಾರೆ ಅಂತಾ ಕಿಡಿಕಾರಿದ್ದಾರೆ.
‘ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ನುಗ್ಗೆಕೇರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ರಾಮಭಕ್ತರ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಮುಸ್ಲಿಮರ ಅಂಗಡಿಗಳನ್ನು ನಾಶಪಡಿಸಿ, ಅವರು ಮಾರಾಟಕ್ಕೆ ಇಟ್ಟಿದ್ದ ಕಲ್ಲಂಗಡಿ ಹಣ್ಣುಗಳನ್ನು ಹಾಳು ಮಾಡಿರುವುದು ಹೇಯ & ಪರಮ ಕಿರಾತಕ ಕೃತ್ಯ’ ಅಂತಾ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





