ಬೆಂಗಳೂರ: ಬಿಜೆಪಿ ಪಕ್ಷವನ್ನು ಕಿತ್ತೊಗೆಯಬೇಕೆಂದು ಹೇಳುವ ಬದಲು, ಬಾಯಿತಪ್ಪಿ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯಬೇಕು.ಪ್ರತಿಭಟನಾ ಭಾಷಣದ ವೇಳೆ ಸಿದ್ದರಾಮಯ್ಯ ಎಡವಟ್ಟು ಮಾಡಿಕೊಂಡಿದ್ದಾರೆ. ನಗರದ ಫ್ರೀಡಂ ಪಾರ್ಕಿನಲ್ಲಿ ಬೆಲೆ ಏರಿಕೆ ಖಂಡಿಸಿ ಇಂದು ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸಿದ ವೇಳೆ ಮಾತನಾಡಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿದ್ದು, ಈ ಸರ್ಕಾರವನ್ನು ಕಿತ್ತೊಗೆಯಬೇಕು. ನಾವು ಅಧಿಕಾರ ಅನುಭವಿಸಬೇಕು ಎಂದಲ್ಲ. ರಾಜ್ಯ, ದೇಶ, ಸಂವಿಧಾನ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗಿಯಬೇಕೆಂದು ಹೇಳಿದ್ದಾರೆ. ಸಿದ್ದರಾಮಯ್ಯ ಮಾತಿನಿಂದ ಬೆಚ್ಚಿಬಿದ್ದ ಕಾರ್ಯಕರ್ತರು, ಸರ್ ಕಾಂಗ್ರೆಸ್ ಅಲ್ಲ. ಬಿಜೆಪಿ ಸರ್ ಎಂದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

