Breaking News

ಶಿರೂರು ಬ್ರಿಡ್ಜ್ ಕಾಮಗಾರಿ ವೀಕ್ಷಣೆ ಮಾಡಿದ ಶಾಸಕಿ


ಶಿರೂರು : ಇಂದು ಶಾಸಕಿ ಕುಸುಮಾವತಿ ಶಿವಳ್ಳಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಶಿರೂರು ಬ್ರಿಡ್ಜ್ ಕಾಮಗಾರಿ ವೀಕ್ಷಣೆ ಮಾಡಿ
ಮಾತನಾಡಿದ ಅವರು, ಕಳೆದ ಹಲವಾರು ದಿನಗಳಿಂದ ನಡೆದ ಹುಬ್ಬಳ್ಳಿ – ಲಕ್ಷ್ಮೀಶ್ವರ ಮಾರ್ಗ ಮಧ್ಯದ ಶಿರೂರು ಬ್ರಿಡ್ಜ್ ಕಾಮಗಾರಿಗೆ ನಾಳೆ ತಾರ್ಕಿಕ ಅಂತ್ಯಸಿಗಲಿದ್ದು ಲಘು ವಾಹನಗಳ ಓಡಾಟಕ್ಕೆ ಅವಕಾಶ ಸಿಗಲಿದೆ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದ್ದಾರೆ.

ಕಳೆದ ಹಲವಾರು ದಿನಗಳ ಹಿಂದೆ ನೆಲಕ್ಕೆ ಅಪ್ಪಳಿಸಿದ್ದ ಶಿರೂರು ಬ್ರಿಡ್ಜ್ ಕಾಮಗಾರಿ ಮಾ .16 ರಂದು ಮುಗಿಯಬೇಕಿತ್ತು . ಆದರೆ ಕಾಮಗಾರಿ ಗುಣಮಟ್ಟ ಕಾಪಾಡಿಕೊಳ್ಳಲು ಹೆಚ್ಚಿನ ಸಮಯ ಪಡೆದಿತ್ತು . ಭಾಗಶಃ ಕಾಮಗಾರಿ ಮುಕ್ತಾಯ ಕಂಡಿದ್ದು ನಾಳೆಯಿಂದ ಬ್ರಿಡ್ಜ್ ಮೇಲೆ ಲಘು ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲು ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದರು . ಮತ್ತೊಮ್ಮೆಬ್ರಿಡ್ಜ್ ಕಾಮಗಾರಿ ಪರಿಶೀಲನೆ ನಡೆಸಿ ಎಂದಿನಂತೆ ಬಸ್ ಹಾಗೂ ಭಾರೀ ಗಾತ್ರದ ವಾಹನಗಳು ಸಂಚಾರಕ್ಕೆ ಶಿರೂರು ಮುಕ್ತ ಅವಕಾಶ ಸಿಗಲಿದೆ ಎಂದರು.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *