ಹುಬ್ಬಳ್ಳಿ: ಹಿರಿಯ ಕಾರ್ಮಿಕರಿಗೆ ಪಿಂಚಣಿ ಯೋಜನೆಯಲ್ಲಿನ ದ್ವಂದ್ವ ನೀತಿಯನ್ನು ಕೈಬಿಟ್ಟು ಅನಿಯಮಿತ ಅರ್ಜಿ ಸಲ್ಲಿಕೆಗೆ ಅವಕಾಶ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟ ಹುಬ್ಬಳ್ಳಿಯಲ್ಲಿಂದು ಪ್ರತಿಭಟನೆ ನಡೆಸಿತು.
ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದಿಂದ ಕಾರ್ಮಿಕ ಭವನ ಚಲೋ ನಡೆಸಿದ ಪ್ರತಿಭಟನಾಕಾರರು ಕಾರ್ಮಿಕರ ಭವನ ಮುಂದೆ ರಾಜ್ಯ ಸರ್ಕಾರ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಕರ್ನಾಟಕ ಸರಕಾರವು ಕಾರ್ಮಿಕ ಇಲಾಖೆಯ ಕಟ್ಟಡ ಕಾರ್ಮಿಕರಿಗೆ ಕಲ್ಯಾಣ ಮಂಡಳಿಯಿಂದ ಅನೇಕ ಸೌಲಭ್ಯಗಳನ್ನು ಮಾಡಿದರು ಸಹಿತ ಅವುಗಳು ಮಾತ್ರ ಅರ್ಹ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಪರಿಣಾಮ ಕಾರ್ಮಿಕ ವರ್ಗಕ್ಕೆ ತುಂಬಾ ನಿರಾಶೆಯಾಗಿದೆ. ಈ ದಿಸೆಯಲ್ಲಿ ಸರ್ಕಾರ ತಮ್ಮ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ಒತ್ತಾಯಿಸಿದರು.
ಬೈಟ್: ದುರುಗಪ್ಪ ಚಿಕ್ಕತುಂಬಳ, ಅಧ್ಯಕ್ಷರು, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಸಂಘಟಿತ ಕಾರ್ಮಿಕರ ಒಕ್ಕೂಟ
bigtvnews | Hubli Dharwad News | Kannada News | Karnataka News Hubli News | News In Hubli | Local news

