ಹುಬ್ಬಳ್ಳಿ : ಕೌಟುಂಬಿಕ ಕಲಹಕ್ಕೆ ಬೇಸತ್ತು ಮನನೊಂದು ಕುತ್ತಿಗೆಗೆ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಹಾನಗಲ್ಲ ಮೂಲದ ಯುವಕನನ್ನು ಕಿಮ್ಸ್‌ಗೆ ದಾಖಲಿಸಲಾಗಿದೆ. ಸಲೀಂ ಎಂಬಾತ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆ ಯತ್ನಿಸಿದ ಯುವಕ, ಮನೆಯಲ್ಲಿನ ಸಮಸ್ಯೆಗೆ ನೊಂದು ಮನೆಯಲ್ಲಿಯೇ ಚಾಕುವಿನಿಂದ ಕುತ್ತಿಗೆಗೆ ಚುಚ್ಚಿಕೊಂಡು ತೀವ್ರವಾಗಿ ಗಾಯಗೊಂಡಿದ್ದನು. ಇದರಿಂದ ಗಂಭೀರವಾಗಿ ಗಾಯಗೊಂಡ ಸಲೀಂನನ್ನು ಕಿಮ್ಸ್‌ಗೆ ದಾಖಲಿಸಲಾಗಿದ್ದು , ತೀವ್ರವಾಗಿ ಕುತ್ತಿಗೆ ಭಾಗಕ್ಕೆ ಪೆಟ್ಟಾಗಿದ್ದರಿಂದ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

