ಬೆಳಗಾವಿ: ಬಿಜೆಪಿ ಜಿಲ್ಲಾ ನಾಯಕರ ಮಧ್ಯೆ ಭಿನ್ನಮತ ಇರುವುದು ನಿಜ .ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಇಲ್ಲಿ ಕೆಲಸ ಮಾಡಬೇಕು. ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡದೆ ಪಕ್ಷದ ಒಳಿತಿಗಾಗಿ ಕೆಲಸ ಮಾಡುವಂತೆ ಎಲ್ಲರಿಗೂ ಮನವರಿಕೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲ ನಾಯಕರ ಜೊತೆಗೆ ಒನ್ ಟು ಒನ್ ಮಾತನಾಡಿದ್ದೇನೆ.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 18 ಕ್ಷೇತ್ರಗಳಲ್ಲಿ ನಾವು ಗೆಲ್ಲಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರೂ ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಾಗಿ ಕೆಲಸ ಮಾಡುವಂತೆ ಸಲಹೆ ನೀಡಲಾಗಿದೆ. ನಾನು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ತಿಂಗಳಿಗೊಮ್ಮೆ ಇಲ್ಲಿಗೆ ಬರುತ್ತೇವೆ. ಇಲ್ಲಿನ ನಾಯಕರ ಜೊತೆಗೆ ಚರ್ಚೆ ಮಾಡಿ ಭಿನ್ನಮತ ಶಮನ ಮಾಡುತ್ತೇವೆ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

