Breaking News

ಈಶ್ವರಪ್ಪರನ್ನು ಸಚಿವಸ್ಥಾನದಿಂದ ವಜಾಗೊಳಿಸುವಂತೆ ಪ್ರತಿಭಟನೆ


ಉಡುಪಿ: ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾದ ಸಚಿವ ಈಶ್ವರಪ್ಪರನ್ನು ಸಚಿವಸ್ಥಾನದಿಂದ ವಜಾಗೊಳಿಸಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಶಾಂಭವಿ ಲಾಡ್ಜ್‌ ಎದುರು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಈಶ್ವರಪ್ಪ ಅವರ ಹರಕು ನಾಲಿಗೆಯ 40 ಪರ್ಸೆಂಟ್ ಕಮಿಷನ್ ದಂಧೆಯ ರಾಜಕಾರಣಕ್ಕೆ ಬೆದರಿ ಬೆಳಗಾವಿಯ ಹಿಂಡಲಗಾ ಗ್ರಾಮದ ಜನಪರ ಚಿಂತನೆಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಕಾರಣವನ್ನು ಮರಣಪತ್ರದಲ್ಲಿ ದಾಖಲಿಸಿದ್ದಾರೆ. ಇದರ ಆಧಾರದ ಮೇಲೆ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *