Breaking News

ಬೆಳಂಬೆಳ್ಳಗ್ಗೆ ಹುಬ್ಬಳ್ಳಿ- ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದಕ್ಕೆ ಶಾಕ್ ಕೊಟ್ಟ ಎಸಿಬಿ

ಹುಬ್ಬಳ್ಳಿ: ಅವಳಿ ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ವಿಭಾಗದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ ಎಸಿಪಿ ಮಾಹಾಂತೇಶ್ ಜಿದ್ದಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ವಿವೇಕ ಕಾರೇಕರ್ ಅವರ ಮೇಲೆ ಭ್ರಷ್ಟಾಚಾರ ಆರೋಪ‌ ಕೇಳಿ ಬಂದ ಹಿನ್ನೆಲೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿರುವ ಎಸಿಬಿ ಅಧಿಕಾರಿಗಳು ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಎಸಿಬಿ ದಾಳಿ ವೇಳೆ 5.80 ಲಕ್ಷ ನಗದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಒಬ್ಬರು ಡಿಎಸ್​​ಪಿ, ಮೂವರು ಇನ್ಸ್​​ಪೆಕ್ಟರ್ ಸೇರಿ 20ಕ್ಕೂ ಹೆಚ್ಚು ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ಮಾಡಿದ್ದಾರೆ. ಸದ್ಯ ಎಸಿಬಿ ಅಧಿಕಾರಿಗಳು ಯೋಜನಾ ವಿಭಾಗದ ಕಡತ ವಿಲೇವಾರಿ ಮಾಡುತ್ತಿದ್ದು, ಕಡತ ವಿಲೇವಾರಿ ಬಳಿಕ ಇನ್ನಷ್ಟು ಭ್ರಷ್ಟಾಚಾರ ಆರೋಪ ಹೊರಬರುವ ಸಾಧ್ಯತೆಯಿದೆ.

Share News

About admin

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *