ಉಡುಪಿ : ನನ್ನ ಸಾವಿಗೆ ಸಚಿವ ಕೆ.ಎಸ್. ಈಶ್ವರಪ್ಪ ಕಾರಣ, ಅವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಡೆತ್ ನೋಟ್ ಬರೆದಿಟ್ಟು ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ ಪಾಟೀಲ ನಗರದ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕೆ.ಎಸ್. ಈಶ್ವರಪ್ಪನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸಂತೋಷ 4 ಕೋಟಿ ರೂಪಾಯಿ ವೆಚ್ಚದಲ್ಲಿ 108 ಕಾಮಗಾರಿ ನೆರವೇರಿಸಿದ್ದರು. ಇದರ ಬಿಲ್ ಪಡೆಯಲು ಈಶ್ವರಪ್ಪ ಶೇ.40 ಕಮಿಷನ್ ಕೇಳುತ್ತಿರುವ ಬಗ್ಗೆ ಸಂತೋಷ ಆರೋಪ ಮಾಡಿದ್ದರು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಈ ಬಗ್ಗೆ ದೂರು ಸಲ್ಲಿಸಿದ್ದರು. ಬಳಿಕ ಈಶ್ವರಪ್ಪ ಅವರು ಸಂತೋಷ ವಿರುದ್ಧವೇ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ಡೆತ್‌ನೋಟ್ : ʼನನ್ನ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಕೈಗೊಂಡಿದ್ದೇನೆ, ನನ್ನ ಸಾವಿಗೆ ಈಶ್ವರಪ್ಪ ಕಾರಣ, ಅವರಿಗೆ ತಕ್ಷ ಶಿಕ್ಷೆ ಆಗಬೇಕು. ನನ್ನ ಹೆಂಡತಿ ಮತ್ತು ಮಗುವಿಗೆ ಪ್ರಧಾನ ಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳು ನೆರವು ನೀಡಬೇಕು ಎಂದು ಕೈಮುಗಿದು ಮನವಿ ಮಾಡುತ್ತೇನೆ. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು. ನನ್ನ ಜೊತೆ ಬಂದ ನನ್ನ ಗೆಳೆಯರಾದ ಸಂತೋಷ ಮತ್ತು ಪ್ರಶಾಂತಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕರೆದುಕೊಂಡ ಬಂದಿರುತ್ತೇನೆ ಅಷ್ಟೇ. ಅವರಿಗೂ ಮತ್ತು ನನ್ನ ಸಾವಿಗೂ ಯಾವುದೇ ಸಂಬಂಧ ಇರುವುದಿಲ್ಲʼ ಎಂದು ಮಾಧ್ಯಮದವರಿಗೆ ಸಂತೋಷ್ ಕಳುಹಿದ್ದರು ಎನ್ನಲಾದ ವಾಟ್ಸಾಪ್ ಡೆತ್‌ನೋಟ್‌ನಲ್ಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

