ಹುಬ್ಬಳ್ಳಿ: ಇಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಸಂಗೊಳ್ಳಿ ರಾಯಣ್ಣ ವರ್ತದ ಮುಂಭಾಗದಲ್ಲಿ ಪ್ರತಿಭಟನೆ ಮಾಡಿದರು .
ಈ ಪ್ರತಿಭಟನೆಯಲ್ಲಿ ಜಿಲ್ಲಾ ಅಧ್ಯಕ್ಷರಾದ ಇರ್ಷಾದ್ ಅಹ್ಮದ್ ಅತ್ತಾರ್ ನವರು ಮಾತನಾಡಿ ಬೆಳಗಾವಿಯ ಹಿಂಡಲಗಾ ಗ್ರಾಮದ ಗುತ್ತಿಗೆದಾರ ಸಂತೋಷ್ ಪಾಟೀಲ ಕಾಮಗಾರಿಗಳ ಬಾಕಿ ಬಿಲ್ ಮೊತ್ತ ಬಿಡುಗಡೆ ಮಾಡಲು 40% ಲಂಚಕ್ಕೆ ಬೇಡಿಕೆ ಇಟ್ಟಿರುವುದಾಗಿ ಪಂಚಾಯತ್ ರಾಜ್ ಸಚಿವ ಕೆಎಸ್ ಈಶ್ವರಪ್ಪ ಹಣ ಬಿಡುಗಡೆ ಮಾಡದೆ ಮೋಸ ಎಸಗಿದ್ದಾರೆ ಎಂದು ಆರೋಪ ಮಾಡಿದ. ಸೋಮವಾರ ಉಡುಪಿಗೆ ಬಂದು ಲಾಡ್ಜ್ನಲ್ಲಿ ತಂಗಿದ್ದ ಸಂತೋಷ್,,”ನನ್ನ ಸಾವಿಗೆ ಈಶ್ವರಪ್ಪನೇ ಕಾರಣ ಎಂದು ಪರಿಚಿತರಿಗೆ ವಾಟ್ಸಪ್ ನಲ್ಲಿ ಸಂದೇಶ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಈಶ್ವರಪ್ಪನವರೇ ನೇರ ಹೊಣೆಗಾರರು ಅವರಿಗೆ ಸಚಿವ ಸ್ಥಾನದಿಂದ ವಜಾ ಮಾಡಬೇಕು ಮತ್ತು ಅವರ ಮೇಲೆ ಕ್ರಿಮಿನಲ್ ಕೇಸಿನಲ್ಲಿ ಬಂದಿಸಿ ಸಚಿವರಿಗೆ ಶಿಕ್ಷೆಯಾಗಬೇಕು ಮತ್ತು ಮತ್ತು ಸಂತೋಷ್ ಪಾಟೀಲ್ ಸಂತೋಷ್ ಪಾಟೀಲ್ ಅವರ ಹೆಂಡತಿ ಜಯಶ್ರೀ ಪಾಟೀಲಗೆ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿ ಆಕ್ರೋಶ ವ್ಯಕ್ತಪಡಿಸಿದರು ಈ ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ಮೊಹಮ್ಮದ್ ರಫೀಕ್, ಪರ್ವೀನ್ ಬೇಗಮ್, ಅಜಮ ಪಠಾಣ್, ಅಬ್ದುಲ್ ಹಮೀದ್, ತೋಪಿಕ್ ಲೋಹನಿ, ಮಕ್ತೂಮ್, ಜಾವಿದ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

