ಕೆಜಿಎಫ್ ಚಾಪ್ಟರ್ 2′ ಸಿನಿಮಾ ಇಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಂಡಿದೆ. 8 ಸಾವಿರಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಈ ಚಿತ್ರ ತೆರೆಕಂಡಿದ್ದು, ಭಾರತದಲ್ಲಿಯೇ 6000 ಗೂ ಅಧಿಕ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ.
ಐದು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣಗೊಂಡಿದ್ದು, ಎಪ್ಪತ್ತು ದೇಶಗಳಲ್ಲಿ ಇಂದು ತೆರೆಕಂಡಿದೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್, ಸಂಜಯ್ ದತ್, ರವೀನಾ ಟಂಡನ್ ಮೊದಲಾದವರು ನಟಿಸಿದ್ದಾರೆ. ವಿಜಯ್ ಕಿರಂಗದೂರು ತಮ್ಮ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಡಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

