ಬೆಳಗಾವಿ: ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಲಂಚದ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಮೃತದೇಹವನ್ನು ಸ್ವಗ್ರಾಮ ಬಡಸದತ್ತ ತೆಗೆದುಕೊಂಡು ಹೋಗಲಾಗುತ್ತಿದೆ.
ಕಿತ್ತೂರು ತಾಲ್ಲೂಕಿನ ಎಂ.ಕೆ. ಹುಬ್ಬಳ್ಳಿ ಮೂಲಕ ಬಡಸ ಗ್ರಾಮಕ್ಕೆ ಸಾಗಿಸಲಾಗುತ್ತಿದೆ. ಅಲ್ಲಿದ್ದ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ ಕುಟುಂಬದವರು, ಆರೋಪಗಳನ್ನು ಬಂಧಿಸಲು ಅಗತ್ಯವಾದ ದಾಖಲೆಗಳು ಇವೆ. ನಮ್ಮ ಬಳಿಯೂ ಸಾಕಷ್ಟಿವೆ. ಅವುಗಳನ್ನು ಕೊಡಲಾಗುವುದು. ಆರೋಪಗಳನ್ನು ಬಂಧಿಸುವವರೆಗೂ ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಲ್ಲಿಯವರು ತನಿಖಾ ಪ್ರಕ್ರಿಯೆ ಪೂರ್ಣಗೊಳಿಸಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

