ಬೆಳಗಾವಿ: ‘ಕಮಿಷನ್ ಕಿರುಕುಳ ನೀಡಿ ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾಗಿರುವ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸಿ ಏ.14ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಸಮ್ಮುಖದಲ್ಲಿ ಇಲ್ಲಿನ ಹೋಟೆಲ್‌ನಲ್ಲಿ ಬುಧವಾರ ರಾತ್ರಿ ನಡೆದ ಸಭೆಯ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.
‘ಈಶ್ವರಪ್ಪ ರಾಜೀನಾಮೆ ಪಡೆಯುವುದು ಮುಖ್ಯವಲ್ಲ, ಅವರನ್ನು ಬಂಧಿಸಬೇಕು ಎನ್ನುವುದು ನಮ್ಮ ಪ್ರಮುಖ ಆಗ್ರಹವಾಗಿದೆ’ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

