ಧಾರವಾಡ: ಏಪ್ರೀಲ್ ತಿಂಗಳ 3 ನೇ ಶನಿವಾರವಾದ 16 ರಂದು ಜಿಲ್ಲೆಯ ಏಳು ತಾಲೂಕುಗಳ ಆಯ್ದ ಗ್ರಾಮಗಳಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ತಹಸೀಲ್ದಾರರು ಗ್ರಾಮವಾಸ್ತವ್ಯ ಮಾಡಲಿದ್ದಾರೆ .
ಕುಂದಗೋಳ ತಾಲೂಕಿನ ಬರದ್ವಾಡ , ಕಲಘಟಗಿ ತಾಲೂಕಿನ ಎಮ್ಮೆಟ್ಟಿ , ಧಾರವಾಡ ತಾಲೂಕಿನ ತಡಕೋಡ , ಹುಬ್ಬಳ್ಳಿ ಗ್ರಾಮೀಣ ತಾಲೂಕಿನ ಕಿರೇಸೂರ , ನವಲಗುಂದ ತಾಲೂಕಿನ ಗೊಬ್ಬರಗುಂಪಿ , ಅಣ್ಣಿಗೇರಿ ತಾಲೂಕಿನ ಕಿತ್ತೂರ ಹಾಗೂ ಅಳ್ಳಾವರ ತಾಲೂಕಿನ ಹೊನ್ನಾಪುರ ಗ್ರಾಮಗಳಲ್ಲಿ ಆಯಾ ತಹಶೀಲ್ದಾರರು ಗ್ರಾಮವಾಸ್ತವ್ಯ ಮಾಡಿ ಸಾರ್ವಜನಿಕರ ಅಹವಾಲುಗಳ ಹಾಗೂ ಬೇಡಿಕೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವರು . ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

