ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೇಸಿಗೆ ಮಳೆಯ ಅಬ್ಬರ ಮುಂದುವರೆದಿದ್ದು, ಬೆಳಗಾವಿ ಮತ್ತು ವಿಜಯಪುರದಲ್ಲಿ ಸಿಡಿಲು ಬಡಿದು ರೈತರಿಬ್ಬರು ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ತುಮ್ಮರಗುದ್ದಿ ಗ್ರಾಮದ ಭೀಮಪ್ಪ ಅಡಿವೆಪ್ಪ ಬಸರಿಮರದ(25) ಎಮ್ಮೆ ಮೇಯಿಸಲು ಹೋದಾಗ ಸಿಡಿಲು ಬಡಿದು ಅಸುನೀಗಿದ್ದರೆ, ಈತನ ತೆಗೆದುಕೊಂಡು ಹೋಗಿದ್ದ ಎಮ್ಮೆ ಕೂಡ ಸಿಡಿಲಿಗೆ ಬಲಿಯಾಗಿದೆ.
ವಿಜಯಪುರ ತಾಲೂಕಿನ ಮದಭಾವಿ ಗ್ರಾಮದಲ್ಲಿ ಜಮೀನಿನಿಂದ ವಾಪಸ್ ಮನೆಗೆ ಬರುವಾಗ ಸಿಡಿಲು ಬಡಿದು ಮರೆಮಸಾಬ ಸಾಹೇಬಲಾಲ ಜಾತಗಾರ(42) ಸಿಡಿಲಿಗೆ ಬಲಿಯಾಗಿದ್ದಾರೆ. ಕೊಡಗು ಜಿಲ್ಲೆಯ ಹಲವು ಕಡೆಗಳಲ್ಲಿ ಗುರುವಾರ ಸಂಜೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಮಂಡ್ಯ ಹುಬ್ಬಳ್ಳಿಯಲ್ಲೂ ಭರ್ಜರಿ ಮಳೆಯಾಗಿದೆ. ನವಲಗುಂದದಲ್ಲಿ ಆಲಿಕಲ್ಲು ಮಳೆ ಸುರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

