Breaking News

ಡಾ. ಸಿದ್ದಲಿಂಗ ಸ್ವಾಮೀಜಿ ಅವರ ಜನ್ಮದಿನಭಾವೈಕ್ಯ ದಿನ’ವನ್ನಾಗಿ ಆಚರಣೆ : ಸಿಎಂ


ಗದಗ: ‘ತೋಂಟದಾರ್ಯ ಮಠದ ಲಿಂಗೈಕ್ಯ ಡಾ. ಸಿದ್ದಲಿಂಗ ಸ್ವಾಮೀಜಿ ಅವರ ಜನ್ಮದಿನವಾದ ಫೆ.21 ಅನ್ನು ಭಾವೈಕ್ಯ ದಿನ’ವನ್ನಾಗಿ ಆಚರಿಸಲು ಸರ್ಕಾರದಿಂದ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ತೋಂಟದಾರ್ಯ ಮಠದಲ್ಲಿ ನಿರ್ಮಾಣಗೊಂಡಿರುವ ತ್ರಿವಿಧ ದಾಸೋಹಿ ಲಿಂಗೈಕ್ಯ ಸಿದ್ಧಲಿಂಗ ಸ್ವಾಮೀಜಿ ಐಕ್ಯಮಂಟಪವನ್ನು ಶುಕ್ರವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

‘ಶ್ರೀಗಳ ಐಕ್ಯಮಂಟಪ‌ವನ್ನು ಲೋಕಾರ್ಪಣೆ‌ ಮಾಡುವ ಅವಕಾಶ, ಹಿಂದೆ ಶ್ರೀಗಳ ಒಡನಾಟ ಸಿಕ್ಕಿದ್ದು ನನ್ನ ಪೂರ್ವಜನ್ಮದ ಪುಣ್ಯ. ತೋಂಟದಾರ್ಯ ಮಠದೊಂದಿಗೆ 35 ವರ್ಷಗಳ ಒಡನಾಟವಿದೆ. ನಾನು ಇಲ್ಲಿಗೆ ಮುಖ್ಯಮಂತ್ರಿಯಾಗಿ ಬರದೇ ಭಕ್ತನಾಗಿ ಬಂದಿದ್ದೇನೆ’ ಎಂದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *