Breaking News

108 ಅಡಿ ಹನುಮಾನ್ ಪ್ರತಿಮೆಯನ್ನು ಅನಾವರಣಗೊಳಿಸಿದ ಪ್ರಧಾನಿ

ಗುಜರಾತ್‌: ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಮೊರ್ಬಿಯಲ್ಲಿ ನಿರ್ಮಿಸಲಾಗಿರುವ 108 ಅಡಿ ಹನುಮಾನ್ ಪ್ರತಿಮೆಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಅನಾವರಣಗೊಳಿಸಿದರು.

ಇದಕ್ಕೂ ಮುನ್ನ ಬೆಳಗ್ಗೆ ಪ್ರಧಾನಿ ಟ್ವಿಟರ್‌ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದರು. ‘ಇಂದು ನಾವು ಹನುಮ ಜಯಂತಿಯ ವಿಶೇಷ ಸಂದರ್ಭವನ್ನು ಆಚರಿಸುತ್ತಿದ್ದೇವೆ. ಗುಜರಾತ್‌ನ ಮೊರ್ಬಿಯಲ್ಲಿ ಬೆಳಗ್ಗೆ 11 ಗಂಟೆಗೆ 108 ಅಡಿ ಎತ್ತರದ ಹನುಮಾನ್ ಜೀ ಪ್ರತಿಮೆ ಉದ್ಘಾಟನೆ ನಡೆಯಲಿದೆ. ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ಕಾರ್ಯಕ್ರಮದ ಭಾಗವಾಗಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಗೌರವವಿದೆ’ ಎಂದು ದೇವರ ಪ್ರತಿಮೆಯ ಚಿತ್ರಗಳೊಂದಿಗೆ ಟ್ವೀಟ್ ಮಾಡಿದ್ದಾರೆ.

Share News

About admin

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *